ದಾವಣಗೆರೆ: ತಂಬಾಕು ದಾಳಿ; 24 ಪ್ರಕರಣ ದಾಖಲಿಸಿದ ಅಧಿಕಾರಿಗಳು

ದಾವಣಗೆರೆ ಆ.30: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಗಳೂರು ತಾಲ್ಲೂಕು ತನಿಖಾ ತಂಡದೊಂದಿಗೆ ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿಕೊಂಡು ತಂಬಾಕು ದಾಳಿ ಕೈಗೊಳ್ಳಲಾಯಿತು. ಸಿಗರೇಟು ಮತ್ತು…

Tobacco Attack; 24 officers registered the case

ದಾವಣಗೆರೆ ಆ.30: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಗಳೂರು ತಾಲ್ಲೂಕು ತನಿಖಾ ತಂಡದೊಂದಿಗೆ ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿಕೊಂಡು ತಂಬಾಕು ದಾಳಿ ಕೈಗೊಳ್ಳಲಾಯಿತು.

ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-2003 ರ ಅಡಿಯಲ್ಲಿ ಒಟ್ಟು 24 ಪ್ರಕರಣ ದಾಖಲಿಸಿ ರೂ.2100 ದಂಡ ವಿಧಿಸಲಾಗಿದೆ. ದಾಳಿಯ ವೇಳೆ ತಂಡವು ಕರ್ನಾಟಕದಲ್ಲಿ ಪ್ರತಿದಿನ ಸರಾಸರಿ 293 ಮಕ್ಕಳು ತಂಬಾಕು ಸೇವನೆಗೆ ಒಳಗಾಗುತ್ತಿದ್ದಾರೆ. ಆದ್ದರಿಂದ 18 ವರ್ಷದೊಳಗಿನ ಯುವಕ-ಯುವತಿಯರಿಗೆ ತಂಬಾಕು ಉತ್ಪನ್ನಗಳು ಮಾರಾಟ ಮಾಡಬಾರದು ಹಾಗೂ ಶೈಕ್ಷಣಿಕ ಸಂಸ್ಥೆಯ 100 ಗಜದ ಒಳಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಅಂಗಡಿ ಮಾಲಿಕರಿಗೆ ಸೂಚಿಸಲಾಯಿತು.

ದಾಳಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಮೇಲ್ವಿಚಾರಣ ಅಧಿಕಾರಿ ಎಂ.ವಿ ಹೊರಕೇರಿ, ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪರುಶುರಾಮ್, ಸಮೂದಾಯ ಆರೋಗ್ಯ ಅಧಿಕಾರಿ ಅಶ್ವಿನಿ.ಸಿ ಮತ್ತು ರವಿ, ಬಿಳಿಚೋಡು ಪೋಲೀಸ್ ಠಾಣೆಯ ಸಿಬ್ಬಂದಿ ಉಮಾಶಂಕರ್ ಭಾಗವಹಿಸಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.