ದಾವಣಗೆರೆ : ಉಜ್ವಲ ಭಾರತ ಉಜ್ವಲ ಭವಿಷ್ಯ ವಿದ್ಯುತ್ @ 2047 ವಿದ್ಯುತ್ ಮಹೋತ್ಸವ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 11 ಗಂಟೆಗೆ ತುಂಗಭದ್ರಾ ಸಭಾಂಗಣ, ಜಿಲ್ಲಾಧಿಕಾರಿಗಳ ಭವನ ದಾವಣಗೆರೆ ಇಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎ ಬಸವರಾಜ ಉದ್ಘಾಟಿಸಲಿದ್ದು, ದಾವಣಗೆರೆ ಉತ್ತರ ವಿಧಾನಸಭೆಯ ಶಾಸಕರಾದ ಎಸ್. ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು.
ಇನ್ನು, ಗೌರವಾನ್ವಿತ ಉಪಸ್ಥಿತಿರಾಗಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ, ಚನ್ನಗಿರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಕೆ. ಮಾಡಾಳ್ ವಿರೂಪಾಕ್ಷಪ್ಪ, ಜಗಳೂರು ಕ್ಷೇತ್ರದ ಶಾಸಕ ಹಾಗೂ ಕನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ವಿ. ರಾಮಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ. ಪಿ. ರೇಣುಕಾಚಾರ್ಯ, ಮಾಯಕೊಂಡ ಕ್ಷೇತ್ರದ ಶಾಸಕ ಹಾಗೂ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಪ್ರೊ. ಎನ್. ಲಿಂಗಣ್ಣ , ಹಾಗೂ ಕರ್ನಾಟಕ ವಿಧಾನ ಪರಿಷತ್‍ನ ಸರ್ಕಾರಿ ಮುಖ್ಯ ಸಚೇತಕರಾದ, ವೈ. ಎ. ನಾರಾಯಣಸ್ವಾಮಿ ಸೇರಿದಂತೆ ಹಲವಾರು ಕಾರ್ಯಕ್ರದಲ್ಲಿ ಪಾಲ್ಗೊಳ್ಳುವರು.




