ದಾವಣಗೆರೆ :ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಹಾಗೂ ಎಮ್. ಎಸ್. ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು ಸಂಯುಕ್ತಾಶ್ರಯದಲ್ಲಿ ಇಂದು ಬೆಳಗ್ಗೆ 10 ಗಂಟೆಗೆ, ಎಮ್. ಎಸ್. ಬಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ “ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್. ಎಸ್. ಎಲ್. ಸಿ, ಪಿಯುಸಿ, ಐ. ಟಿ. ಐ, ಡಿಪ್ಲೊಮಾ, ಬಿ. ಎ, ಬಿ. ಕಾಂ, ಬಿ. ಎಸ್ಸಿ, ಬಿ. ಬಿ. ಎ/ಬಿ. ಬಿ. ಎಂ, ಬಿ. ಸಿ. ಎ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದು, ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ನಿರುದ್ಯೋಗ ಯುವಕ, ಯುವತಿಯರಿಗೆ ಇದೊಂದು ಸುವರ್ಣವಕಾಶವಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.