ದಾವಣಗೆರೆ ರೈತರಿಗೆ ಸಿಹಿಸುದ್ದಿ: ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ

ದಾವಣಗೆರೆ ಆ.03 : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಷ್ಟ್…

animal-husbandry-vijayaprabha-news

ದಾವಣಗೆರೆ ಆ.03 : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಷ್ಟ್ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಆ.05 ರಿಂದ ಆ.20 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ತರಬೇತಿ, ಆಧುನಿಕ ಹೈನುಗಾರಿಕೆ ಬಗ್ಗೆ ತರಬೇತಿ ಕಾರ್ಯಕ್ರಮದಲ್ಲಿ ತಲಾ 25 ಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.

ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ತರಬೇಕು, ತರಬೇತಿ ಅವಧಿಯಲ್ಲಿ ಯಾವುದೇ ಪೆÇ್ರೀತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

Vijayaprabha Mobile App free

ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ ದಾವಣಗೆರೆ ಇವರ ದೂರವಾಣಿ ಸಂಖ್ಯೆ 08192-233787 ಗೆ ಸಂಪರ್ಕಿಸಬಹುದಾಗಿದೆ ಎಂದು (ಆಡಳಿತ) ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.