ದಾವಣಗೆರೆ ಜು.20: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಜುಲೈ 21 ರಿಂದ 27 ರವರೆಗೆ ಆಧುನಿಕ ಹೈನುಗಾರಿಕೆ ಬಗ್ಗೆ ತರಬೇತಿ, ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ತರಬೇತಿ, ಕಾರ್ಯಕ್ರಮದಲ್ಲಿ ತಲಾ 25 ಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.
ಇನ್ನು, ತರಬೇತಿಗೆ ಹಾಜರಾಗುವ ರೈತರು ಎರಡು ಪಾಸ್ಪೋರ್ಟ್ ಸೈಜ್ ಪೋಟೋ, ಆಧಾರ್ ಕಾರ್ಡ್ ಜೆರಾಕ್ಸ್, ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ತರಬೇಕಾಗಿದ್ದು, ತರಬೇತಿ ಅವಧಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ ದಾವಣಗೆರೆ ಇವರ ದೂರವಾಣಿ ಸಂಖ್ಯೆ 08192-233787 ಗೆ ಸಂಪರ್ಕಿಸಲು ತಿಳಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.