ಓಬವ್ವ ಆತ್ಮ ರಕ್ಷಣಾ ಕಲೆ ಕೌಶಲ್ಯಗಳ ತರಬೇತಿ: ಫೆ. 07 ರಂದು ಉದ್ಘಾಟನೆ

ದಾವಣಗೆರೆ ಫೆ.05: ದಾವಣಗೆರೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಸತಿ ಶಾಲೆ/ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿನಿಯರಿಗೆ ‘ಓಬವ್ವ…

ದಾವಣಗೆರೆ ಫೆ.05: ದಾವಣಗೆರೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಸತಿ ಶಾಲೆ/ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿನಿಯರಿಗೆ ‘ಓಬವ್ವ ಆತ್ಮ ರಕ್ಷಣಾ ಕಲೆ’ ಕೌಶಲ್ಯಗಳ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಫೆ.07 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಭೈರತಿ) ಅವರು ಉದ್ಘಾಟನೆ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಅವರು ವಹಿಸಲಿದ್ದು, ಸಂಸದರಾರ ಡಾ. ಜಿ.ಎಂ. ಸಿದ್ದೇಶ್ವರ ಹಾಗೂ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರು, ವಿಧಾನ ಪರಿಷತ್ತು ಸದಸ್ಯರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮಕ್ಕೆ ಎಲ್ಲಾ ಸಂಘಟನೆ ಹಾಗೂ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ರೇಷ್ಮಾ ಕೌಸರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.