ದಾವಣಗೆರೆ ಫೆ.25: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ “ಹೆಣ್ಣು ಮಕ್ಕಳಿಗೆ ವಿವಿಧ ಇಲಾಖೆಗಳ/ಸರ್ಕಾರದಿಂದ ದೊರೆಯಬಹುದಾದ ಕಾನೂನಾತ್ಮಕ ಅವಕಾಶಗಳ ಬಗ್ಗೆ ತರಬೇತಿ ಕಾರ್ಯಕ್ರಮ” ಫೆ.28 ರ ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ನಗರದ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ನಾಯಕ್ ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸುವರು. ಉಪಪ್ರಾಚಾರ್ಯ ಎ.ಆರ್.ಮಂಜಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನಗರ ವಿಭಾಗ ಪೊಲೀಸ್ ಉಪ ಅಧೀಕ್ಷಕ ನರಸಿಂಹ.ವಿ.ತಾಮ್ರಧ್ವಜ, ಮಹಿಳಾ ಪೊಲೀಸ್ ಠಾಣೆ ನಿರೀಕ್ಷಕರಾದ ಶಿಲ್ಪ ವೈ.ಎಸ್, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ರೇಷ್ಮಾ ಕೌಸರ್ ಭಾಗವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ವಕೀಲ ಎಲ್.ಹೆಚ್ ಅರುಣ್‍ಕುಮಾರ್ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.



