ಸಿದ್ದಾಪುರ: ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದದ ವಾಟೇ ಹೊಳೆ ಫಾಲ್ಸ್‌ನಲ್ಲಿ ನಡೆದಿದೆ. ಶಿರಸಿ ಮೂಲದ ಅಕ್ಷಯ ಭಟ್ ಹಾಗೂ ಸುಹಾಸ ಶೆಟ್ಟಿ ನೀರುಪಾಲಾಗಿರುವ ಯುವಕರು ಎನ್ನಲಾಗಿದೆ.
ಆರು ಜನ ಸ್ನೇಹಿತರು ಸೇರಿ ಫಾಲ್ಸ್ ನೋಡಲು ಹೋಗಿದ್ದರು ಎನ್ನಲಾಗಿದ್ದು, ಈ ವೇಳೆ ಫಾಲ್ಸ್‌ನಲ್ಲಿ ಈಜಲು ಹೋದಾಗ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಡಿ.ಎಸ್.ಪಿ. ಕೆ.ಎಲ್.ಗಣೇಶ, ಸಿದ್ದಾಪುರ ಇನಸ್ಪೆಕ್ಟರ್ ಜೆ.ಬಿ.ಸೀತಾರಾಮ ದೌಡಾಯಿಸಿದ್ದು, ಮುಳುಗುತಜ್ಞರು, ಮಾರಿಕಾಂಬಾ ಲೈಫ್ ಗಾರ್ಡ್ ಗೋಪಾಲ ಗೌಡ ತಂಡ ಸಹ ಕಣ್ಮರೆಯಾದವರಿಗಾಗಿ ಶೋಧ ಕಾರ್ಯಚರಣೆ ನಡೆಸಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.