ಮಂಡ್ಯ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಸದಸ್ಯರು ವಿಸಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಮಾಸ್ತಪ್ಪ ತನ್ನ ಪತ್ನಿ ಮತ್ತು ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತರನ್ನು ಶ್ರೀರಂಗಪಟ್ಟಣ ಗಂಜಾಂ ನಿವಾಸಿಗಳಾದ ಮಾಸ್ತಪ್ಪ (65), ರತ್ನಮ್ಮ (45) ಮತ್ತು ಲಕ್ಷ್ಮಿ (18) ಎಂದು ಗುರುತಿಸಲಾಗಿದೆ. ಸಾಲದ ಸುಳಿಗೆ ಸಿಲುಕಿ ಪತ್ನಿ, ಮಗಳೊಂದಿಗೆ ವಿಸಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಮಂಡ್ಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.