ದಾವಣಗೆರೆ: ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಲಸಿಕಾ ತರಬೇತಿ

ದಾವಣಗೆರೆ ಸೆ.13:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಇಂದು ಜಿಲ್ಲೆಯಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಕುರಿತು ಎರಡು ದಿನಗಳ…

Vaccination training for health department staff

ದಾವಣಗೆರೆ ಸೆ.13:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಇಂದು ಜಿಲ್ಲೆಯಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಕುರಿತು ಎರಡು ದಿನಗಳ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಈ ತರಬೇತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ನಾಗರಾಜ ಮಾತನಾಡಿ ಸಮುದಾಯದಲ್ಲಿ ಎಲ್ಲಾ ಸಾರ್ವಜನಿಕರಿಗೆ ಆರೋಗ್ಯ ಕಾರ್ಯಕ್ರಮದಲ್ಲಿ ಬರುವಂತಹ ಸೌಲಭ್ಯಗಳು ದೊರೆಯಬೇಕು ಹಾಗೂ ಸಮುದಾಯಕ್ಕೆ ಮನಮುಟ್ಟುವಂತೆ ತಿಳಿಸಿ ಅಸಾಂಕ್ರಾಮಿಕ & ಸಾಂಕ್ರಾಮಿಕ ರೋಗಗಳಿಂದ ಮುಕ್ತಾರನ್ನಾಗಿ ಮಾಡಿ ಆರೋಗ್ಯವೇ ಭಾಗ್ಯ ಎಂಬ ವೇದ ವ್ಯಾಖ್ಯಾದೊಂದಿಗೆ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಡಾ|| ಮೀನಾಕ್ಷೀ.ಕೆ.ಎಸ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು ಹಾಗೂ ಡಾ.ಸುರೇಶ್.ಎನ್.ಬಾರ್ಕಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಮತ್ತು ಟಿಓಟಿ ಆರೋಗ್ಯಾಧಿಕಾರಿಳಾದ ಡಾ.ಆಶಾಭಾನು ಪ್ರಕಾಶ್ ಮತ್ತು ಡಾ.ಮಹೇಶ್‍ರವರು ತರಬೇತಿಯನ್ನು ನೀಡುವುದರ ಮುಖಾಂತರ ಈ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.