ದಾವಣಗೆರೆ ಜೂ.21: ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೇಂದ್ರಗಳ ಮೂಲಕ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿರುತ್ತದೆ.
ಸಾರ್ವಜನಿಕರುಗಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಸರ್ಕಾರದ ವಿವಿಧ ಸೇವೆಗಳನ್ನು ಸರ್ಕಾರ ನಿಗಧಿಪಡಿಸಿದ ದರದಲ್ಲೇ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ಗ್ರಾಮ ಒನ್ ನಲ್ಲಿ ಆದಾಯ ಪ್ರಮಾಣ ಪತ್ರ, ಬೆಳೆವಿಮೆ ಸೇರಿದಂತೆ ಸುಮಾರು 700 ಸೇವೆಗಳನ್ನು ಒದಗಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment