ವಿಜಯನಗರ: ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿ ಗ್ರಾಮಲೆಕ್ಕಾಧಿಕಾರಿಗಳೇ ನಮ್ಮ ಬಲವೆಂದ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್

ಹೊಸಪೇಟೆ(ವಿಜಯನಗರ),ಜು.27: ಪ್ರವಾಹ ಪರಿಸ್ಥಿತಿ ತಲೆದೂರಿದ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಮತ್ತು ಜನಸಾಮಾನ್ಯರಿಗೆ ಅಗತ್ಯ ಸೌಕರ್ಯಗಳ ಕಲ್ಪಿಸುವಿಕೆ ವಿಷಯದಲ್ಲಿ ಗ್ರಾಮಲೆಕ್ಕಾಧಿಕಾರಿಗಳು ವಹಿಸಿದ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಹೇಳಿದರು. ಕಂದಾಯ…

Aniruddha Shravan vijayaprabha news

ಹೊಸಪೇಟೆ(ವಿಜಯನಗರ),ಜು.27: ಪ್ರವಾಹ ಪರಿಸ್ಥಿತಿ ತಲೆದೂರಿದ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಮತ್ತು ಜನಸಾಮಾನ್ಯರಿಗೆ ಅಗತ್ಯ ಸೌಕರ್ಯಗಳ ಕಲ್ಪಿಸುವಿಕೆ ವಿಷಯದಲ್ಲಿ ಗ್ರಾಮಲೆಕ್ಕಾಧಿಕಾರಿಗಳು ವಹಿಸಿದ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಹೇಳಿದರು.

ಕಂದಾಯ ದಿನಾಚರಣೆ ನಿಮಿತ್ತ ವಿಜಯನಗರ ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ವತಿಯಿಂದ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಂದಾಯ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮಲೆಕ್ಕಾಧಿಕಾರಿಗಳು ಕಂದಾಯ ಇಲಾಖೆಯಲ್ಲಿನ ಪ್ರಮುಖ ಬಲ ಎಂದು ಬಣ್ಣಿಸಿದ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರವಾಹ ಪರಿಸ್ಥಿತಿ ತಲೆದೂರಿ 22 ಗ್ರಾಮಗಳು ಪ್ರವಾಹ ಪರಿಸ್ಥಿತಿಗೆ ಸಿಲುಕಿದ ಸಂದರ್ಭದಲ್ಲಿಯೂ ಮುಖ್ಯಮಂತ್ರಿಗಳಿಗೆ ನಮ್ಮ ಜಿಲ್ಲೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸುತ್ತೇವೆ ಎಂದು ಹೇಳಿದ್ದೇವೆ;ಇದಕ್ಕೆ ಮುಖ್ಯ ಕಾರಣ ನಮ್ಮ ವಿಎಗಳ ಬಲ ಎಂದರು.

Vijayaprabha Mobile App free

ಯಾವುದೇ ಪ್ರಕೃತಿ ವಿಕೋಪಗಳು ಎದುರಾದಾಗ, ಸಮಸ್ಯೆಗಳು ಬಂದಾಗ ಕಂದಾಯ ಇಲಾಖೆಯ ನೌಕರರ ತೋರುವ ಕರ್ತವ್ಯ ನಿಷ್ಠೆ ಅದ್ಭುತವಾಗಿದ್ದು, ಗ್ರಾಮಲೆಕ್ಕಾಧಿಕಾರಿಗಳು ಇನ್ನೂ ಹೆಚ್ಚೆಚ್ಚು ಕೆಲಸಗಳನ್ನು ಮಾಡಬೇಕು ಎಂದು ಅವರಿಗೆ ಕಿವಿಮಾತು ಹೇಳಿದರು.

ಬಳ್ಳಾರಿ ಜಿಲ್ಲೆಯಲ್ಲಿ ಪ್ರೋಬೆಷನರಿ ಅವಧಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಸಿರಗುಪ್ಪ ತಾಲೂಕಿನ ಗ್ರಾಮಲೆಕ್ಕಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಬಗೆಯನ್ನು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸ್ಮರಿಸಿಕೊಂಡರು.

ಕಂದಾಯ ಇಲಾಖೆ ನೌಕರರಿಗೆ ಖಾಲಿ ನಿವೇಶನ ವಸತಿಗೃಹಗಳ ಬೇಡಿಕೆ;ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಕಂದಾಯ ಇಲಾಖೆಯ ನೌಕರರಿಗೆ ಖಾಲಿ ನಿವೇಶನ ಮತ್ತು ವಸತಿ ಗೃಹಗಳ ನಿರ್ಮಾಣದ ಬೇಡಿಕೆ ಬಂದಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಹಾಗೂ ಸರ್ಕಾರದಿಂದ ಆದೇಶ ಬಂದ ನಂತರ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದರು.

ವಿಜಯನಗರ ಹೊಸ ಜಿಲ್ಲೆಯಾಗಿ ರಚನೆಯಾಗಿದ್ದು, ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ಕಂಪ್ಯೂಟರ್ಸ್, ಜಿರಾಕ್ಸ್ ಮೆಷಿನ್,ಸ್ಕ್ಯಾನರ್‍ಗಳನ್ನು ಆದಷ್ಟು ಬೇಗ ಪೂರೈಸಲಾಗುವುದು ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಭರವಸೆ ನೀಡಿದರು.

ತಂತ್ರಜ್ಞಾನ ಮತ್ತು ಮೊಬೈಲ್ ಕೆಲಸ ಮಾಡಲು ಮತ್ತಷ್ಟು ಸುಲಭವಾಗಿಸಿದ್ದು, ಗ್ರಾಮಲೆಕ್ಕಾಧಿಕಾರಿಗಳು ಇನ್ನೂ ಉತ್ತಮ ರೀತಿಯಲ್ಲಿ ಸಾರ್ವಜನಿಕರ ಕೆಲಸ-ಕಾರ್ಯಗಳನ್ನು ಮಾಡಬೇಕು ಎಂದು ಹೇಳಿದರು.

ವಿಜಯನಗರ ಜಿಲ್ಲೆಯಾದ ನಂತರ ಹರಪನಹಳ್ಳಿಯ ಗ್ರಾಮ ಲೆಕ್ಕಾಧಿಕಾರಿಗಳ ಹಳೆಯಜೇಷ್ಠತಾ ಪಟ್ಟಿ ಸರಿಯಾಗಿ ಇರದ ಕಾರಣ ಹೊಸಜೇಷ್ಠತಾ ಪಟ್ಟಿ ತಯಾರಿಸುವ ಸವಾಲು ಎದುರಾಗಿತ್ತು; ಎಡಿಸಿ ಎನ್.ಮಹೇಶ್‍ಬಾಬು ಅವರ ಮಾರ್ಗದರ್ಶನದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು ಯಾವುದೇ ತೊಂದರೆಯಾಗದೇ ರೀತಿಯಲ್ಲಿ ತಯಾರಿಸಿದ್ದಾರೆ ಎಂದರು.

ಅಪರ ಜಿಲ್ಲಾಧಿಕಾರಿಗಳಾದ ಎನ್.ಮಹೇಶ್‍ಬಾಬು, ಹರಪನಹಳ್ಳಿ ಉಪವಿಭಾಗದ ಉಪ ವಿಭಾಗಾಧಿಕಾರಿ ಪ್ರಕಾಶ ಟಿ.ವಿ, ಹೊಸಪೇಟೆ ವಿಭಾಗದ ಉಪ ವಿಭಾಗಾಧಿಕಾರಿ ಸಿದ್ರಾಮೇಶ್ವರ ಅವರು ಮಾತಾನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಕೊಪ್ಪಳದ ಜಿಲ್ಲಾ ತರಬೇತಿ ಸಂಸ್ಥೆಯ ನಿವೃತ್ತ ಉಪ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು ಎಂಬ ವಿಷಯದ ಕುರಿತು ಹಾಗೂ ಹೊಸಪೇಟೆಯ ನಿವೃತ್ತ ಉಪ ತಹಶೀಲ್ದಾರರಾದ ಹೆಚ್.ಸುಶಿಲೇಂದ್ರ ಅವರು ಕಂದಾಯ ಇಲಾಖೆ ಕಾಯ್ದೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜಿ.ಮಲ್ಲಿಕಾರ್ಜುನಗೌಡ ಅವರು ಸ್ವಾಗತಿಸಿದರು. ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಯಂಕಾರೆಡ್ಡಿ ಅವರು ಪ್ರಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಂದಾಯ ದಿನಚರಣೆ ನಿಮಿತ್ತ ಏರ್ಪಡಿಸಿರುವ ರಕ್ತದಾನ ಶಿಬಿರವನ್ನು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಉದ್ಘಾಟಿಸಿದರು. ಎಸ್ಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಕಂದಾಯ ಇಲಾಖೆ ಸಿಬ್ಬಂದಿಯ ಮಕ್ಕಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವಿಜಯನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಉತ್ತಮ ಸೇವೆಸಲ್ಲಿಸಿದ ಶಿರಸ್ತೇದಾರರು, ಪ್ರ.ದ.ಸ, ಗ್ರಾಮಲೆಕ್ಕಾಧಿಕಾರಿಗಳು ಮತ್ತು ಗ್ರಾಮ ಸಹಾಯಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಹೊಪೇಟೆಯ ತಹಶೀಲ್ದಾರರಾದ ವಿಶ್ವಜೀತ ಮೇಹತಾ, ಹೂವಿನಹಡಗಲಿ ತಾಲೂಕಿನ ತಹಶೀಲ್ದಾರರಾದ ಶರಣಮ್ಮ.ಕೆ, ಹರಪನಹಳ್ಳಿ ತಾಲೂಕಿನ ತಹಶೀಲ್ದಾರ್ ಡಾ.ಶಿವಕುಮಾರ ಬಿರದಾರ, ಹಗರಿಬೊಮ್ಮನಹಳ್ಳಿ ತಾಲೂಕಿನ ತಹಶೀಲ್ದಾರ್ ಕಾರ್ತಿಕ್.ವಿ, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಭವನದ ತಹಶೀಲ್ದಾರರಾದ ಗುರುಬಸವರಾಜ.ಕೆ, ಮೇಘ,ಗ್ರಾಮಸಹಾಯಕ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ.ಟಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕುಗಳ ಘಟಕಗಳ ಅಧ್ಯಕ್ಷರು, ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಮತ್ತು ಗ್ರಾಮ ಸಹಾಯಕ ಸಂಘಗಳ ತಾಲೂಕು ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸರ್ವ ಸದಸ್ಯರು ಸೇರಿದಂತೆ ಇತರರು ಇದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.