ಕೋಲಾರ: ಜಿಲ್ಲೆಯ ಕೆಜಿಎಫ್ ತಾಲ್ಲೂಕಿನಲ್ಲಿ ಬುಧವಾರ 38 ವರ್ಷದ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ. ಮಹಿಳೆಯನ್ನು ಗೃಹಿಣಿ ತಿಪ್ಪಮ್ಮ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಮಹಿಳೆ ಮತ್ತು ಆಕೆಯ ಪತಿ 20 ವರ್ಷಗಳ ಹಿಂದೆ ವಿವಾಹವಾಗಿದ್ದು ಅಷ್ಟೇನು ಉತ್ತಮ ಸಂಬಂಧ ಹೊಂದಿರಲಿಲ್ಲ. ದಂಪತಿಗಳ ನಡುವಿನ ವೈವಾಹಿಕ ಕಲಹವು ಮಹಿಳೆಯನ್ನು ಇಂತಹ ಕಠಿಣ ಕ್ರಮ ನಿರ್ಧಾರ ತೆಗೆದುಕೊಳ್ಳಲು ಪ್ರೇರೇಪಿಸಿದೆ ಎಂದು ಶಂಕಿಸಲಾಗಿದೆ.
ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮಹಿಳೆ ತನ್ನ ಏಳು ವರ್ಷದ ಮಗಳು ಮತ್ತು ನಾಲ್ಕು ವರ್ಷದ ಮಗನನ್ನು ನೇಣು ಬಿಗಿದುಕೊಂಡು ಕೊಂದಿದ್ದಾಳೆ. ಅವರನ್ನು ಕೊಂದ ನಂತರ, ಆಕೆ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಳು ಎಂದು ತಿಳಿಸಿದ್ದಾರೆ.
ಆಕೆಯ ಪತಿ ಮನೆಗೆ ಬಂದಾಗ ಮಕ್ಕಳು ಮತ್ತು ಪತ್ನಿ ಶವಗಳನ್ನು ಪತ್ತೆ ಮಾಡಿದ್ದು, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯ ಭಾಗವಾಗಿ ಮಹಿಳೆಯ ಗಂಡನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.