ವಿಜಯನಗರ: ಜಿಲ್ಲೆಯ ಹೂವಿನಹಡಗಲಿಯ ಕೋರ್ಟ್ ಎದುರಿಗಿರುವ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ನೀಡುವ ಊಟದಲ್ಲಿ ಹುಳುಗಳು ಕಾಣಿಸಿಕೊಳ್ಳುತ್ತಿದ್ದು, ಸ್ವಚ್ಛತೆಗೆ ಗಮನಹರಿಸುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ.
ಹೌದು, ʻಆಹಾರದಲ್ಲಿ ಹುಳು ಇರುವ ಬಗ್ಗೆ ದೂರು ಹೇಳಿದರೆ, ಹುಳು ತೆಗೆದು ಊಟ ಮಾಡಿ ಎಂದು ಅಡುಗೆಯವರು ಉಡಾಫೆ ಉತ್ತರ ನೀಡುತ್ತಾರೆ. ವಾರ್ಡನ್‌ಗೆ ತಿಳಿಸಿದರೆ, ಸಿಬ್ಬಂದಿ ಕೊರತೆಯ ಸಬೂಬು ಹೇಳುತ್ತಾರೆʼ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.