ಯಾದಗಿರಿ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ(45) ಹಾಗೂ ಮಲ್ಲಯ್ಯ(35) ಮೃತ ದುರ್ದೈವಿಗಳಾಗಿದ್ದಾರೆ.
ಹಳ್ಳೆಪ್ಪ ಹಾಗೂ ಮಲ್ಲಯ್ಯ ಜೇವರ್ಗಿ ತಾಲೂಕಿನ ಚಿಕ್ಕಮುದವಾಳ ಗ್ರಾಮದ ಬಳಿಯಿರುವ ಜಮೀನು ನೋಡಿಕೊಂಡು ಬರಲು ಬೈಕ್ ನಲ್ಲಿ ತೆರಳುತ್ತಿದ್ದರು. ಕಾರೊಂದನ್ನು ಓವರ್ ಟೆಕ್ ಮಾಡಲು ಮುಂದಾಗಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.
ಅಪಘಾತದ ರಭಸಕ್ಕೆ ಕಾರು ಸಹ ಪಲ್ಟಿಯಾಗಿದ್ದು, ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment