ಅಧಿಕಾರ ಸಿಕ್ಕಲ್ಲಿ ಜಂಪ್‌ ಆಗುವ ಯೋಗೇಶ್ವರ್: ನಿಖಿಲ್‌ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಅಧಿಕಾರ ಎಲ್ಲಿ ಸಿಗುತ್ತದೆಯೋ ಅಲ್ಲಿಗೆ ಜಂಪ್ ಆಗುತ್ತಾರೆ. ಯಾವಾಗ ತರಾತುರಿಯಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರೋ ಆಗಲೇ ಅವರು ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿತ್ತು ಎಂದು ಜೆಡಿಎಸ್‌…

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಅಧಿಕಾರ ಎಲ್ಲಿ ಸಿಗುತ್ತದೆಯೋ ಅಲ್ಲಿಗೆ ಜಂಪ್ ಆಗುತ್ತಾರೆ. ಯಾವಾಗ ತರಾತುರಿಯಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರೋ ಆಗಲೇ ಅವರು ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿತ್ತು ಎಂದು ಜೆಡಿಎಸ್‌ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯೋಗೇಶ್ವರ್ ಅವರಿಗೆ 25 ವರ್ಷ ರಾಜಕೀಯ ಅನುಭವವಿದೆ. ಅವರು ಒಂದು ಬದ್ಧತೆ ಇಟ್ಟುಕೊಂಡು ರಾಜಕೀಯ ಮಾಡಿಲ್ಲ ಎಂದು ವ್ಯಂಗ್ಯವಾಗಿ ಹೇಳಿದರು.

ನಮ್ಮಿಂದ ಯಾವುದೇ ತಪ್ಪು ಆಗಿಲ್ಲ. ಜೆಡಿಎಸ್ ಪಕ್ಷದಿಂದಲೇ ಅವರು ಸ್ಪರ್ಧೆ ಮಾಡಬಹುದಿತ್ತು‌. ದೇವೇಗೌಡರು ಮತ್ತು ಕುಮಾರಸ್ವಾಮಿ ಜತೆ ಚರ್ಚೆ ಮಾಡಬಹುದಿತ್ತು. ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ. ಕಳೆದ ಎರಡು ತಿಂಗಳಿಂದ ಯೋಗೇಶ್ವರ್‌ ಕಾಂಗ್ರೆಸ್ ಅವರ ಜತೆ ಸಂಪರ್ಕದಲ್ಲಿದ್ದರು. ರಾಜಕಾರಣವನ್ನು ಅಳೆದು ತೂಗಿ ಮಾಡುವ ಬುದ್ಧಿವಿಗಳಿಗೆ ಅವರ ಮುಂದಿನ ಜೀವನ ಹೇಗಿರುತ್ತದೆ ಎಂಬುದು ಗೊತ್ತಾಗುತ್ತದೆ ಎಂದರು.

Vijayaprabha Mobile App free

ಬಿಜೆಪಿಯ ರಾಜ್ಯಮಟ್ಟದ ಒಕ್ಕಲಿಗರನ್ನು ಕುಮಾರಸ್ವಾಮಿ ಅವರು ತುಳಿಯುತ್ತಾರೆ ಎನ್ನುವ ಅವರ ಮಾತಿಗೆ ಹಿಂದೆ ಕುಮ್ಮಕ್ಕು ಕೊಟ್ಟವರು ಯಾರು ಎಂಬುದನ್ನು ಪ್ರಸ್ತುತ ಬೆಳವಣಿಗೆ ನೋಡಿದರೆ ರಾಜ್ಯದ ಜನಕ್ಕೆ ಗೊತ್ತಾಗುತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದಿದ್ದಾರೆ.

ಸುರೇಶಗೆ ಧೈರ್ಯ ಇಲ್ಲವೇ?:

ಕಳೆದ ಲೋಕಸಭೆ ಚುನಾವಣೆಯ ಸೋಲಿನ ಬಳಿಕ ಸಚಿವರೂ ಸೇರಿದಂತೆ ಡಿ.ಕೆ.ಶಿವಕುಮಾರ್ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾಕೆ ತಮ್ಮ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಧೈರ್ಯ ಮಾಡಲಿಲ್ಲ? ಡಿ.ಕೆ.ಸುರೇಶ್ ನಿಲ್ಲುವ ಧೈರ್ಯ ಪ್ರದರ್ಶನ ಮಾಡಲಿಲ್ಲ ಯಾಕೆ? ಹೊರಗಿನಿಂದ ಯಾಕೆ ಹೈಜಾಕ್ ಮಾಡಿ ಅಭ್ಯರ್ಥಿ ಆಗಿಸುತ್ತಿದ್ದಾರೆ ಎಂದು ನಿಖಿಲ್ ಅವರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.