ಗಮನಿಸಿ: ಪ್ಯಾನ್-ಆಧಾರ್ ಲಿಂಕ್ ಮಾಡಲು ಮಾರ್ಚ್ 31 ಕೊನೆಯ ಅವಕಾಶ; ಇವರಿಗೆ ಮಾತ್ರ ಕಡ್ಡಾಯವಲ್ಲ..!

Vijayaprabha

ಈ ವರ್ಷದ ಹಣಕಾಸು ವರ್ಷ ಮುಗಿಯುತ್ತಿದ್ದಂತೆ ಪ್ಯಾನ್ ಕಾರ್ಡ್(PAN Card )-ಆಧಾರ್ ಕಾರ್ಡ್(Aadhaar Card) ಲಿಂಕ್ ಗಡುವು ಸಹ ಮಾರ್ಚ್ 31ರಂದು ಕೊನೆಗೊಳ್ಳುತ್ತದೆ. ಕೇಂದ್ರ ಸರ್ಕಾರ ಈಗಾಗಲೇ ಪ್ಯಾನ್ ಕಾರ್ಡ್ -ಆಧಾರ್ ಕಾರ್ಡ್ ಲಿಂಕ್  (PAN Card Link with Aadhaar Card)ಮಾಡಲು ಹಲವು ಬಾರಿ ಡೆಡ್‌ಲೈನ್‌ ವಿಸ್ತರಿಸಿದೆ.

ಇದನ್ನು ಓದಿ: 500ರೂ ನೋಟು ನಕಲಿ ಅಥವಾ ಅಸಲಿ ಎಂದು ಗುರುತಿಸುವುದು ಹೇಗೆ? ಈ ಕುತೂಹಲಕಾರಿ ಸಂಗತಿಗಳನ್ನು ತಿಳಿದುಕೊಳ್ಳಿ

ಆದರೆ, ಈ ಬಾರಿ ಕೊನೆಯ ಅವಕಾಶ. ಅಷ್ಟರಲ್ಲಿ 1,000ರೂ ದಂಡ ಕಟ್ಟಿ ಪ್ಯಾನ್ ಕಾರ್ಡ್ -ಆಧಾರ್ ಕಾರ್ಡ್ ಲಿಂಕ್ ಮಾಡಿ. ಇಲ್ಲದಿದ್ದರೆ ಪ್ಯಾನ್ ಕಾರ್ಡ್ ನಂತರ ಕೆಲಸ ಮಾಡುವುದಿಲ್ಲ. ಇದರಿಂದ ಬ್ಯಾಂಕ್ ಖಾತೆ ತೆರೆಯಲು ಸಾಧ್ಯವಾಗುವುದಿಲ್ಲ. ITR ಫೈಲ್ ಮಾಡಲು ಆಗುವುದಿಲ್ಲ. TDS ಹೆಚ್ಚು ಕಡಿತವಾಗುತ್ತದೆ. ಪ್ಯಾನ್, ಆಧಾರ್ ಲಿಂಕ್‌ಗಾಗಿ https://www.incometax.gov.in/iec/foportal/ ಇಲ್ಲಿ ಕ್ಲಿಕ್ ಮಾಡಿ.

ಇದನ್ನು ಓದಿ: ನಿಮ್ಮ ಆಧಾರ್‌-ಪ್ಯಾನ್‌ ಲಿಂಕ್‌ ಆಗದಿದ್ದರೆ ಸಮಸ್ಯೆ ಏನು? 1000 ರೂ ದಂಡದೊಂದಿಗೆ ಸುಲಭವಾಗಿ ಆಧಾರ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿ

ಇವರಿಗೆ ಪ್ಯಾನ್​-ಆಧಾರ್ ಲಿಂಕ್ ಕಡ್ಡಾಯವಲ್ಲ..!!!

ಆಧಾರ್ ಹಾಗೂ ಪ್ಯಾನ್ ಕಾರ್ಡ್​ ಲಂಕ್ (PAN Card Link with Aadhaar Card ಮಾಡಲು ಮಾರ್ಚ್​ 31 ಕೊನೆಯ ದಿನವಾಗಿದೆ. ಈಗಾಗಲೇ ಲಿಂಕ್ ಮಾಡಿರುವವರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಸರ್ವರ್ ಡೌನ್ ಆಗುತ್ತಿರುವ ಹಿನ್ನೆಲೆ ಲಿಂಕ್ ಮಾಡುವವರು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಪ್ಯಾನ್ -ಆಧಾರ್ ಕಾರ್ಡ್ ಲಿಂಕ್ ಮಾಡಲು ಕೆಲವರಿಗೆ ವಿನಾಯಿತಿ ನೀಡಲಾಗಿದೆ.

ಇದನ್ನು ಓದಿ: CRPF ನಲ್ಲಿ 9,212 ಕಾನ್ಸ್‌ಟೇಬಲ್‌ ಹುದ್ದೆಗಳು; SSLC ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

ಹೌದು, ಅಸ್ಸಾಂ, ಜಮ್ಮು-ಕಾಶ್ಮೀರ, ಮೇಘಾಲಯದ ನಿವಾಸಿಗಳಿಗೆ ಆಧಾರ್- ಪ್ಯಾನ್ ಜೋಡಣೆ ಕಡ್ಡಾಯವಲ್ಲ (Aadhaar- PAN linking is not mandatory).1961 ರ ಆದಾಯ ತೆರಿಗೆ ಇಲಾಖೆಯ ಪ್ರಕಾರ ಅನಿವಾಸಿ ಭಾರತೀಯ(ಎನ್ಆರ್ ಐ) ರಿಗೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಲ್ಲ. ಕಳೆದ ವರ್ಷದ ಅವಧಿಯಲ್ಲಿ 80 ವರ್ಷ ಅಥವಾ ಅದಕ್ಕಿಂತಲೂ ಮೇಲ್ಪಟ್ಟ ವಯಸ್ಸಿನವರಾಗಿದ್ದರೆ, ಅಂತಹ ವ್ಯಕ್ತಿಗಳ ಆಧಾರ್- ಪ್ಯಾನ್ ಜೋಡಣೆ ಕಡ್ಡಾಯವಾಗಿರುವುದಿಲ್ಲ. ಭಾರತದ ಪ್ರಜೆಯಲ್ಲದ ವ್ಯಕ್ತಿಗೆ ಪ್ಯಾನ್- ಆಧಾರ್ ಜೋಡಣೆ ಕಡ್ಡಾಯವಲ್ಲ.

ಇದನ್ನು ಓದಿ: ಏರ್‌ಟೆಲ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಒಂದೇ ಕನೆಕ್ಷನ್‌ನಲ್ಲಿ 2 ಸಿಮ್‌ಗಳು, ಉಚಿತ DTH, OTT, ಅನಿಯಮಿತ ಡೇಟಾ!

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version