ನವದೆಹಲಿ : ರಾಜ್ಯದಲ್ಲಿ ಭಾರಿ ಮಳೆಯಿಂದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ರಾಜ್ಯದ ಹಲವಡೆ ಪ್ರವಾಹ ಉಂಟಾಗಿದ್ದು ಸಂತ್ರಸ್ತರ ರಕ್ಷಣೆಗೆ ಸರ್ಕಾರ ಪ್ರಯತ್ನಿಸುತ್ತಿದೆ.
ಈಗ ರಾಜ್ಯದಲ್ಲಿ ಪ್ರವಾಹದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಸಾಧ್ಯವಾದಷ್ಟು ಸಹಾಯ ಮಾಡುವುದುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದೂ, “ಕರ್ನಾಟಕದ ವಿವಿಧ ಭಾಗಗಳಲ್ಲಿನ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದೇನೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ನಮ್ಮ ಸಹೋದರಿಯರು ಮತ್ತು ಸಹೋದರರೊಂದಿಗೆ ನಾವು ಜೊತೆಯಾಗಿ ನಿಲ್ಲುತ್ತೇವೆ.
ಪ್ರವಾಹ ಸಿಲುಕಿದವರ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಬೇಕಿರುವ ಎಲ್ಲಾ ಸೌಲಭ್ಯಗಳನ್ನು ಸಾಧ್ಯವಿರುವಷ್ಟು ಕೇಂದ್ರದಿಂದ ನೀಡುವುದಾಗಿ ಭರವಸೆ ನೀಡುತ್ತೇನೆ” ಎಂದು ಹೇಳಿದ್ದಾರೆ.
Spoke to CM @BSYBJP Ji on the rainfall and flood situation in various parts of Karnataka. We stand in solidarity with our sisters and brothers of Karnataka affected by the floods. Assured all possible support from the Centre in rescue and relief works that are underway.
— Narendra Modi (@narendramodi) October 16, 2020