ಧರ್ಮದ ಆಧಾರದಲ್ಲಿ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: Supreme Court

ನವದೆಹಲಿ: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸರಿಯಲ್ಲ, ಸಂವಿಧಾನದಲ್ಲಿ ಅದಕ್ಕೆ ಅವಕಾಶವೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಮುಸ್ಲಿಂ ಸಮುದಾಯದ 77 ಪಂಗಡಗಳನ್ನು ಒಬಿಸಿ ವ್ಯಾಪ್ತಿಗೆ ಸೇರ್ಪಡೆ ಮಾಡಿದ್ದ ಪಶ್ಚಿಮ ಬಂಗಾಳ ಸರ್ಕಾರದ…

ನವದೆಹಲಿ: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸರಿಯಲ್ಲ, ಸಂವಿಧಾನದಲ್ಲಿ ಅದಕ್ಕೆ ಅವಕಾಶವೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಮುಸ್ಲಿಂ ಸಮುದಾಯದ 77 ಪಂಗಡಗಳನ್ನು ಒಬಿಸಿ ವ್ಯಾಪ್ತಿಗೆ ಸೇರ್ಪಡೆ ಮಾಡಿದ್ದ ಪಶ್ಚಿಮ ಬಂಗಾಳ ಸರ್ಕಾರದ ಕ್ರಮ ಅಸಿಂಧುಗೊಳಿಸಿದ್ದ ಕೊಲ್ಕತ್ತಾ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠ, ಜಾತಿ ಆಧಾರಿತ ಮತ್ತು ಆರ್ಥಿಕತೆ ಆಧಾರಿತ ಮೀಸಲಿಗೆ ಅವಕಾಶ ಇದೆಯೇ ಹೊರತು ಧರ್ಮದ ಆಧಾರದ ಮೇಲೆ ಮೀಸಲು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

Vijayaprabha Mobile App free

ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಸರ್ಕಾರ ಧರ್ಮ ಆಧಾರಿತ ಮೀಸಲು ನೀಡಿಲ್ಲ. ಎಲ್ಲಾ ಧರ್ಮಗಳಲ್ಲಿಯೂ ಹಿಂದುಳಿದ ಜನರಿದ್ದಾರೆ. ಜನರು ಆರ್ಥಿಕವಾಗಿ ಹಿಂದುಳಿದಿರುವುದನ್ನು ಗುರುತಿಸಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ವಾದ ಮಂಡಿಸಿದ್ದಾರೆ.

ಮೀಸಲಾತಿ ನೀಡಲು ಹಿಂದುಳಿದಿರುವುದನ್ನು ಗುರುತಿಸಲು ಸರ್ಕಾರ ತೆಗೆದುಕೊಂಡ ಮಾನದಂಡದ ಪ್ರಮಾಣಿಕೃತ ದತ್ತಾಂಶಗಳು ಎಲ್ಲಿವೆ ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ಪ್ರಶ್ನಿಸಿದ್ದಾರೆ.

ಸರ್ಕಾರದ ಬಳಿ ಅಗತ್ಯವಿರುವ ಎಲ್ಲಾ ಡೇಟಾಗಳು ಇವೆ. ಸಮಗ್ರ ಅಧ್ಯಯನ ನಡೆಸಿ ಮೀಸಲಾತಿ ನೀಡಲಾಗಿದೆ ಎಂದು ಕಪಿಲ್ ಸಿಬಲ್ ಉತ್ತರಿಸಿದ್ದಾರೆ. ಬಂಗಾಳ ಸರ್ಕಾರದ ಮೀಸಲು ನೀತಿಗೆ ಮಧ್ಯಂತರ ಆದೇಶ ನೀಡಬೇಕು. ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕು ಎಂಬ ಕಪಿಲ್ ಸಿಬಲ್ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, 2025ರ ಜನವರಿ 7 ಕ್ಕೆ ವಿಚಾರಣೆಯನ್ನು ಮುಂದೂಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.