ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಂಗಡಿಗಳಿಗೆ ಬೆಂಕಿ, 11 ಕುಕಿಗಳ ಹತ್ಯೆ

ಮಣಿಪುರ (ಇಂಫಾಲ್‌): ಈ ಹಿಂದೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕುಖ್ಯಾತವಾಗಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಸೋಮವಾರ ಮತ್ತೆ ಭಾರೀ ಪ್ರಮಾಣದ ಹಿಂಸಾಚಾರ ನಡೆದಿದೆ. ಜಿರಿಬಮ್‌ ಜಿಲ್ಲೆಯ ಪೊಲೀಸ್‌ ಠಾಣೆ ಮತ್ತು ಸಿಆರ್‌ಪಿಎಫ್‌ ಕ್ಯಾಂಪ್‌ನ ಮೇಲೆ…

crime vijayaprabha

ಮಣಿಪುರ (ಇಂಫಾಲ್‌): ಈ ಹಿಂದೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕುಖ್ಯಾತವಾಗಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಸೋಮವಾರ ಮತ್ತೆ ಭಾರೀ ಪ್ರಮಾಣದ ಹಿಂಸಾಚಾರ ನಡೆದಿದೆ. ಜಿರಿಬಮ್‌ ಜಿಲ್ಲೆಯ ಪೊಲೀಸ್‌ ಠಾಣೆ ಮತ್ತು ಸಿಆರ್‌ಪಿಎಫ್‌ ಕ್ಯಾಂಪ್‌ನ ಮೇಲೆ ಕುಕಿ ಉಗ್ರರ ಗುಂಪೊಂದು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ ಭಾರೀ ಪ್ರಮಾಣದ ಗುಂಡಿನ ದಾಳಿ ನಡೆಸಿದೆ.

ಈ ವೇಳೆ ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ 11 ಕುಕಿ ಉಗ್ರರು ಸಾವನ್ನಪ್ಪಿದ್ದಾರೆ. ಜೊತೆಗೆ ಗುಂಡಿನ ಚಕಮಕಿ ವೇಳೆ ಸಿಆರ್‌ಪಿಎಫ್‌ನ ಇಬ್ಬರು ಯೋಧರು ಕೂಡಾ ಗಾಯಗೊಂಡಿದ್ದು ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಕುಕಿ ಉಗ್ರರ ಗುಂಪೊಂದು ಸೋಮವಾರ ಮಧ್ಯಾಹ್ನ ಜಿರಿಬಮ್‌ ಜಿಲ್ಲೆಯ ಬೊರೊಬೆಕ್ರಾ ಪೊಲೀಸ್‌ ಠಾಣೆ ಹಾಗೂ ಬಳಿಯಲ್ಲಿದ್ದ ಸಿಆರ್‌ಪಿಎಫ್‌ ಕ್ಯಾಂಪ್‌ ಮೇಲೆ ಮಧ್ಯಾಹ್ನ ದಾಳಿ ನಡೆಸಿದೆ. ಜೊತೆಗೆ ಸಮೀಪದ ಮಾರುಕಟ್ಟೆಗೂ ಹೋಗಿ ಅಂಗಡಿಗಳಿಗೆ ಬೆಂಕಿ ಇಟ್ಟು, ಹಲವು ಮನೆಗಳ ಮೇಲೆ ದಾಳಿ ನಡೆದಿದೆ.

Vijayaprabha Mobile App free

ಈ ವೇಳೆ ಈ ವೇಳೆ ಯೋಧರು ಪ್ರತಿದಾಳಿ ನಡೆಸಿದ್ದು, ಒಂದು ಗಂಟೆ ಕಾಲ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ 11 ಉಗ್ರರು ಸಾವನ್ನಪ್ಪಿದ್ದಾರೆ. 11 ಕುಕಿಗಳ ಸಾವಿನ ಹಿನ್ನೆಲೆಯಲ್ಲಿ ಕುಕಿ ಸಂಘಟನೆಯಾದ ಕುಕಿ ಝೋ, ಮಂಗಳವಾರ ಬೆಳಗ್ಗೆ 5 ಗಂಟೆಯಿಂದ ಸಂಜೆ 6 ಗಂಟೆವರೆಗೆ ಗುಡ್ಡಗಾಡು ಪ್ರದೇಶದಲ್ಲಿ ಬಂದ್‌ಗೆ ಕರೆ ಕೊಟ್ಟಿದೆ.

ಈ ನಡುವೆ ಘಟನಾ ಸ್ಥಳದಿಂದ ಉಗ್ರರು ಕೆಲ ನಾಗರಿಕರನ್ನು ಅಪಹರಿಸಿರುವ ಶಂಕೆ ಕೂಡಾ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ಕುರಿತು ಭದ್ರತಾ ಪಡೆಗಳು ಮಾಹಿತಿ ಸಂಗ್ರಹಿಸುವ ಕೆಲಸ ಆರಂಭಿಸಿವೆ. ಕಳೆದ ವರ್ಷದ ಮೇ ತಿಂಗಳ ಬಳಿಕ ರಾಜ್ಯದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯದ ನಡುವೆ ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.