ಬೆಂಗಳೂರು, ವಿಜಯಪ್ರಭ.ಕಾಂ: ಜಾತಿ ಗಣತಿ (caste census report) ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೆಚ್ಚು ಉತ್ಸಕವಾಗಿದೆ. ಆದರೆ ಪ್ರತಿನಿತ್ಯ ವಾದ, ವಿವಾದಗಳು ನಡೆಯುತ್ತಲೇ ಇದ್ದು, ಸದ್ಯ ರಾಜಕೀಯ ದಾಳವಾಗಿದೆ.
ಇನ್ನು ಜಾತಿಗಣತಿ ವರದಿ ಅನುಷ್ಠಾನಕ್ಕೆ ತರುವ ವಿಚಾರಕ್ಕೆ ಕಾಂಗ್ರೆಸ್‌ನಲ್ಲೇ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ಕುರಿತು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಸ್.ಆರ್ .ಶ್ರೀನಿವಾಸ್ ಗುಬ್ಬಿ ವಿರೋಧ ವ್ಯಕ್ತಪಡಿಸಿದ್ದಾರೆ.
ಮೇಲ್ನೋಟಕ್ಕೆ ಈ ವರದಿ ಅವೈಜ್ಞಾನಿಕವಾಗಿದ್ದು, ಎಲ್ಲರೊಂದಿಗೆ ಚರ್ಚಿಸಿ ನಂತರ ಸಂಪುಟ ಸಭೆಯಲ್ಲಿ ಚರ್ಚಿಸಲಿ ಎಂದು ಹೇಳಿದ್ದಾರೆ. ಎಲ್ಲಾ ಸಮುದಾಯಕ್ಕೂ ಸಾಮಾಜಿಕ, ಶೈಕ್ಷಣಿಕ ನ್ಯಾಯ ಸಿಗಬೇಕು. ಆ ರೀತಿಯಲ್ಲಿ ವರದಿಯನ್ನು ಮತ್ತೊಮ್ಮೆ ತಯಾರಿಸಿ ಬಿಡುಗಡೆ ಮಾಡಲಿ ಎಂದು ಹೇಳಿದ್ದಾರೆ.
[su_highlight background=”#ff9e99″]Read Also: UPI : ಯುಪಿಐ ಬಳಕೆದಾರರಿಗೆ ಖುಷಿ ಸುದ್ದಿ; ಯುಪಿಐ ವಹಿವಾಟಿನ ಮಿತಿ 10,000 ರೂಗೆ ಹೆಚ್ಚಿಸಿದ ಆರ್‌ಬಿಐ [/su_highlight]
ಜಾತಿ ಗಣತಿ ವರದಿ ಅನುಷ್ಠಾನ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಜಾತಿ ಗಣತಿ ವರದಿಯನ್ನು ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಬಳಸಿಕೊಳ್ಳಲಾಗುತ್ತಿದೆ ಎಂಬ ವಿರೋಧ ಪಕ್ಷದವರ ಆರೋಪವನ್ನು ಸಿಎಂ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂಬ ಆರ್. ಅಶೋಕ್ ಅವರ ಹೇಳಿಕೆ ಓದಿ ಮನಸ್ಸು ನಿರಾಳವಾಯಿತು ಎಂದಿದ್ದಾರೆ.
ಅಶೋಕ್ ಅವರೇ ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ, ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
English Summary: Congress MLA srinivas Gubbi oppose to implementation of caste census report