ಸಂವಿಧಾನ ಬದಲಾವಣೆ’ ಹೇಳಿಕೆಯನ್ನು ತಪ್ಪಾಗಿ ತಿರುಚಲಾಗಿದೆ: ಡಿಕೆ ಶಿವಕುಮಾರ್

ಧರ್ಮಾಧಾರಿತ ಮೀಸಲಾತಿಗಾಗಿ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದ್ದು, ಆದರೆ ಇದನ್ನು ಮಾತ್ರ ಡಿಕೆ ಶಿವಕುಮಾರ್ ಅವರು ಆರೋಪವನ್ನು ತೀವ್ರವಾಗಿ ನಿರಾಕರಿಸಿದ್ದಾರೆ. ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ…

ಧರ್ಮಾಧಾರಿತ ಮೀಸಲಾತಿಗಾಗಿ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದ್ದು, ಆದರೆ ಇದನ್ನು ಮಾತ್ರ ಡಿಕೆ ಶಿವಕುಮಾರ್ ಅವರು ಆರೋಪವನ್ನು ತೀವ್ರವಾಗಿ ನಿರಾಕರಿಸಿದ್ದಾರೆ. ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರದ ತಂತ್ರ ಇದು ಎಂದು ಹೇಳಿದರು.

ಧರ್ಮಾಧಾರಿತ ಮೀಸಲಾತಿಗೆ ಅನುಗುಣವಾಗಿ “ಸಂವಿಧಾನವನ್ನು ಬದಲಾಯಿಸುವ” ಬಗ್ಗೆ ಡಿಸೆಎಂ ಡಿಕೆ ಶಿವಕುಮಾರ್ ಅವರ ಹೇಳಿಕೆಗಳು ರಾಜಕೀಯ ಬಿರುಗಾಳಿಗೆ ಕೇಂದ್ರ ಬಿಂದುವಾಗಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್ ನಾಯಕರು ಸಾಂವಿಧಾನಿಕ ನೀತಿಗಳನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದರು, ಶಿವಕುಮಾರ್ ಇದಕ್ಕೆ ಪ್ರತಿಯಾಗಿ ಪ್ರತಿಕ್ರಿಯಿಸುತ್ತಾ, ಸಾರ್ವಜನಿಕರನ್ನು ದಾರಿ ತಪ್ಪಿಸಲು ತಮ್ಮ ಮಾತುಗಳ ಉದ್ದೇಶಪೂರ್ವಕ ತಪ್ಪು ವ್ಯಾಖ್ಯಾನ ಮಾಡುತ್ತಿದ್ದಾರೆ ಎಂದು ಪ್ರತ್ಯರೋಪ ಮಾಡಿದರು.

ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಶಿವಕುಮಾರ್, ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದು ಮತ್ತು ಬಿಜೆಪಿ ತಮ್ಮ ವಿರುದ್ಧ ಸುಳ್ಳು ಪ್ರಚಾರದ ಅಭಿಯಾನವನ್ನು ನಡೆಸುತ್ತಿದೆ ಎಂದು ಆರೋಪಿಸಿದರು. “ನಾನು ಸಂವಿಧಾನವನ್ನು ಬದಲಾಯಿಸುತ್ತೇನೆ ಎಂದು ಹೇಳಿಲ್ಲ. ಬಿಜೆಪಿ ಉದ್ದೇಶಪೂರ್ವಕವಾಗಿ ನನ್ನ ಮಾತುಗಳನ್ನು ತಿರುಚುತ್ತಿದೆ ಮತ್ತು ಸುಳ್ಳು ಪ್ರಚಾರವನ್ನು ಹರಡುತ್ತಿದೆ. ಇದರ ವಿರುದ್ಧ ನಾನು ಕಾನೂನು ಕ್ರಮ ಕೈಗೊಳ್ಳುತ್ತೇನೆ” ಎಂದು ಅವರು ಹೇಳಿದರು.

Vijayaprabha Mobile App free

ನ್ಯಾಯಾಲಯದ ತೀರ್ಪುಗಳ ಆಧಾರದ ಮೇಲೆ ಸಾಂವಿಧಾನಿಕ ತಿದ್ದುಪಡಿಗಳನ್ನು ಮಾಡಿದ ಸಂದರ್ಭಗಳಿವೆ ಎಂದು ಮಾತ್ರ ನಾನು ಹೇಳಿದ್ದೇ ಆದರೆ ಬಿಜೆಪಿ ನನ್ನ ಮಾತುಗಳನ್ನೇ ತಿರುಚಿ ಹಾಕಿ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ” ಎಂದು ಅವರು ಆರೋಪಿಸಿದರು.

ಶಿವಕುಮಾರ್ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರುವ ವಿಡಿಯೋವನ್ನು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ ಹಂಚಿಕೊಂಡ ನಂತರ ವಿವಾದ ಭುಗಿಲೆದ್ದಿದ್ದು. ಆ ವೀಡಿಯೋ ಕ್ಲಿಪ್‌ನಲ್ಲಿ, ಶಿವಕುಮಾರ್ ಮೀಸಲಾತಿ ವಿಷಯದ ಬಗ್ಗೆ ಚರ್ಚಿಸುತ್ತಾ “ಒಳ್ಳೆಯ ದಿನ ಬರುತ್ತದೆ, ಸಂವಿಧಾನವು ಬದಲಾಗಲಿದೆ” ಎಂದು ಹೇಳುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತದೆ. ಈ ಹೇಳಿಕೆಯನ್ನು ಬಿಜೆಪಿ ನಾಯಕರು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳತ್ತಿದ್ದಾರೆ, ಧರ್ಮಾಧಾರಿತ ಮೀಸಲಾತಿ ನೀಡಲು, ವಿಶೇಷವಾಗಿ ಮುಸ್ಲಿಮರಿಗೆ ಸಂವಿಧಾನವನ್ನು ಬದಲಾಯಿಸಲು ಕಾಂಗ್ರೆಸ್ ಸಂಚು ರೂಪಿಸುತ್ತಿದೆ ಎಂದು ಬಿಜೆಪಿ ನಾಯಕರುಆರೋಪಿಸುತ್ತಿದ್ದಾರೆ.

ಶಿವಕುಮಾರ್ ಅವರ ಹೇಳಿಕೆಗಳು ಧರ್ಮ ಆಧಾರಿತ ನೀತಿಗಳ ಬಗೆಗಿನ ಒಲವನ್ನು ಬಹಿರಂಗಪಡಿಸಿವೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಹೇಳಿದ್ದಾರೆ ಮತ್ತು ಈ ವಿಷಯದ ಬಗ್ಗೆ ರಾಹುಲ್ ಗಾಂಧಿಯವರ ಮೌನವನ್ನು ಸಹ ಅವರು ಪ್ರಶ್ನಿಸಿದ್ದಾರೆ. .

ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರ ಟೀಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, “ಅವರು ಇಡೀ ದೇಶವನ್ನೇ ದಾರಿ ತಪ್ಪಿಸುತ್ತಿರುವ ರಾಜಕೀಯ ವ್ಯಕ್ತಿ. ಬಿಜೆಪಿ ಯಾವಾಗಲೂ ರಾಷ್ಟ್ರವನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತದೆ. ನಾನು ಸಂವಿಧಾನವನ್ನು ಬದಲಾಯಿಸುತ್ತೇನೆ ಎಂದು ಎಲ್ಲಿ ಹೇಳಿದ್ದೇನೆಂದು ಅವರು ನನಗೆ ತೋರಿಸಲಿ. ಬಿಜೆಪಿ ಅಗ್ಗದ ರಾಜಕೀಯದಲ್ಲಿ ತೊಡಗಿದೆ. ಅವರು ನನ್ನ, ಸೋನಿಯಾ ಗಾಂಧಿಯವರ ಕುಟುಂಬದ ಅಥವಾ ಕಾಂಗ್ರೆಸ್ ಪಕ್ಷದ ಹೆಸರನ್ನು ತೆಗೆದುಕೊಳ್ಳದಿದ್ದರೆ, ಅವರಿಗೆ ರಾತ್ರಿ ಮಲಗಲು ಸಾಧ್ಯವಾಗುವುದಿಲ್ಲ” ಎಂದು ತಿರುಗೇಟು ನೀಡಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply