ಸಿ.ಟಿ.ರವಿ ಬಂಧನ ಪ್ರಕರಣ: ಖಾನಾಪುರ ಸಿಪಿಐ ಅಮಾನತು

ಬೆಳಗಾವಿ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಒಬ್ಬರು ಸಸ್ಪೆಂಡ್ ಆಗಿದ್ದಾರೆ. ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಜುನಾಥ್ ನಾಯಕ್ ಅಮಾನತುಗೊಂಡಿರುವ ಖಾನಾಪುರ…

ಬೆಳಗಾವಿ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಒಬ್ಬರು ಸಸ್ಪೆಂಡ್ ಆಗಿದ್ದಾರೆ. ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಮಂಜುನಾಥ್ ನಾಯಕ್ ಅಮಾನತುಗೊಂಡಿರುವ ಖಾನಾಪುರ ಸಿಪಿಐ. ಕರ್ತವ್ಯ ಲೋಪ ಆರೋಪದಲ್ಲಿ ಐಜಿಪಿ ವಿಕಾಸ್ ಕುಮಾರ್ ಸಿಪಿಐ ಮಂಜುನಾಥ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಸಿ.ಟಿ.ರವಿ ಅವರನ್ನು ಬಂಧಿಸಿ ಖಾನಾಪುರ ಠಾಣೆಗೆ ಕರೆತಂದಿದ್ದ ವೇಳೆ ಬಿಜೆಪಿ ನಾಯಕರನ್ನು ಠಾಣೆಯ ಒಳಗೆ ಬಿಟ್ಟಿದ್ದಕ್ಕೆ ಸಿಪಿಐ ಮಂಜುನಾಥ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಅಂದು ಠಾಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಇದ್ದರು. ಆದಾಗ್ಯೂ ಈಗ ಸಿಪಿಐ ಮಂಜುನಾಥ್ ಅವರನ್ನು ಮಾತ್ರ ಅಮಾನತು ಮಾಡಿರುವುದು ಮತ್ತೊಂದು ಚರ್ಚೆಗೆ ಕಾರಣವಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.