ಪ್ರಾಮಾಣಿಕವಾಗಿದ್ದರೆ ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸಿ: ಸಿಎಂ ವಿರುದ್ಧ ಬಿಎಸ್‌ವೈ ಕಿಡಿ

ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಿಂದ ವಾಸ್ತವಿಕ ವಿಚಾರಗಳು ಹೊರಕ್ಕೆ ಬರಲು ಸಾಧ್ಯ ಎಂದು ಹೇಳಿದರು.

ಮುಖ್ಯಮಂತ್ರಿಗಳು ತಮ್ಮ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದಾರೆ. ಲೋಕಾಯುಕ್ತದ ಬದಲಾಗಿ ತಮ್ಮ ಕುಟುಂಬದ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಪ್ರಾಮಾಣಿಕತೆಯನ್ನು ತೋರಿಸಲಿ ಎಂದು ಒತ್ತಾಯಿಸಿದರು.

Vijayaprabha Mobile App free

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯಡಿಯೂರಪ್ಪ, ರಾಜ್ಯದೆಲ್ಲೆಡೆ ವಕ್ಫ್ ಒತ್ತುವರಿ ನಡೆದಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಬೇಕಿದೆ. ಅಲ್ಲದೇ, ಸಂಬಂಧಿತ ಸಚಿವ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.