ಶಾಸಕ ಕೊತ್ತೂರು ಮಂಜುನಾಥ್ ಆಪ್ತ, ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಭಾನುವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ನೀಲಕಂಠೇಗೌಡ ಅವರನ್ನು ತಕ್ಷಣವೇ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ
ಸೋಮವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಈ ಹಿಂದೆ ಮುಳಬಾಗಿಲು ತಾಲೂಕು ಪಂಚಾಯ್ತಿ ಅಧ್ಯಕ್ಷರಾಗಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿಯೂ ಅವರು ಕಾರ್ಯನಿರ್ವಹಿಸುತ್ತಿದ್ದರು.
ತಮ್ಮ ನೆಚ್ಚಿನ ನಾಯಕನನ್ನು ಕಳೆದುಕೊಂಡ ತಾಲ್ಲೂಕಿನ ನಾಯಕರಲ್ಲಿ ಮತ್ತು ಕುಟುಂಬಸ್ಥರಲ್ಲಿ ಶೋಕ ಮನೆ ಮಾಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.