ಶೋಭಾ ಕರಂದ್ಲಾಜೆ ಬಗ್ಗೆ ಹಗುರ ಮಾತನಾಡಿದ ಸಚಿವ ಬೈರತಿಗೆ ರೇಣುಕಾಚಾರ್ಯ ಎಚ್ಚರಿಕೆ

ದಾವಣಗೆರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ಮಾನನಷ್ಟ ಮೊಕದ್ದಮೆ ದಾಖಲಿಸುವುದರ ಜತೆಗೆ ಘೇರಾವ್ ಮಾಡುತ್ತೇವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಸಚಿವ ಬೈರತಿ ಸುರೇಶ್‌ ಅವರಿಗೆ ಎಚ್ಚರಿಕೆ…

ದಾವಣಗೆರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ಮಾನನಷ್ಟ ಮೊಕದ್ದಮೆ ದಾಖಲಿಸುವುದರ ಜತೆಗೆ ಘೇರಾವ್ ಮಾಡುತ್ತೇವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಸಚಿವ ಬೈರತಿ ಸುರೇಶ್‌ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಹೋದರಿ ಶೋಭಾ ಕರಂದ್ಲಾಜೆ ಅವರು ರಾಜಕಾರಣಕ್ಕೆ ಬಂದಾಗ ನೀವು (ಬೈರತಿ ಸುರೇಶ) ರಾಜಕೀಯಕ್ಕೆ ಬಂದಿರಲಿಲ್ಲ. ರಾಜಕಾರಣದಲ್ಲಿ ನೀವಿನ್ನೂ ಬಚ್ಚಾ. ಶೋಭಾ ಅವರು ಹಲವು ಬಾರಿ ಸಂಸದರಾಗಿ 2ನೇ ಬಾರಿ ಕೇಂದ್ರ ಸಚಿವರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ. ಅಲ್ಲದೆ ಘೇರಾವ್ ಮಾಡುತ್ತೇವೆ ಎಂದು ಎಚ್ಚರಿಸಿದರು.

ನಿನ್ನ ಕೆಲಸ ನೀನು ಮಾಡಪ್ಪಾ ಅಂದ್ರೆ ಮುಖ್ಯಮಂತ್ರಿ ಹಿಂದೆ, ಮುಂದೆಯೇ ಸುತ್ತಾಡುತ್ತ ಲೂಟಿ ಮಾಡುತ್ತಿರುವೆ. ವಿಶೇಷ ವಿಮಾನದಲ್ಲಿ ಹೋಗಿ ಮುಡಾ ಕಡತಗಳನ್ನು ತಂದು, ಸುಟ್ಟು ಹಾಕಿದ ನಿನ್ನ ಬಗ್ಗೆ ಮಾತನಾಡಲು ನಮಗೂ ಬರುತ್ತದೆ ಎಂದು ಗುಡುಗಿದ್ದಾರೆ.

Vijayaprabha Mobile App free

ಯಾರು ಏನು ಹೇಳಿದ್ದರು:

ಮುಡಾ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಸುಟ್ಟು ಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಬೈರತಿ ಸುರೇಶ್ ಅವರು, ಮಾಜಿ ಸಿಎಂ ಯಡಿಯೂರಪ್ಪ ಅವರ ಪತ್ನಿಯ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರ ಇದೆ ಎಂದು ಗಂಭೀರ ಆಪಾದನೆ ಮಾಡಿದ್ದರು. ಹೀಗೆ ಇಬ್ಬರ ಮಧ್ಯೆ ವಾಕ್ಸಮರ ಮುಂದುವರೆದಿದ್ದು, ಇದೀಗ ಯಡಿಯೂರಪ್ಪ ಆಪ್ತ ರೇಣುಕಾಚಾರ್ಯ ಅವರು ಬೈರತಿಗೆ ಟಾಂಗ್ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.