ಸಿದ್ದರಾಮಯ್ಯ ಮೊದಲು ಹುಲಿಯಂತಿದ್ದರು ಈಗ ಇಲಿ ಆಗಿದ್ದಾರೆ: ಜಾರಕಿಹೊಳಿ ಟೀಕೆ

ರಾಯಚೂರು: ಈ ಮೊದಲು ಹುಲಿಯಂತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಕಾಂಗ್ರೆಸ್‌ನಲ್ಲಿ ಇಲಿಯಂತಾಗಿದ್ದಾರೆ. ಅವರ ಪರಿಸ್ಥಿತಿ ಕಂಡರೆ ಅಯ್ಯೋ ಎನಿಸುತ್ತಿದೆ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ramesh jarkiholi vijayaprabha

ರಾಯಚೂರು: ಈ ಮೊದಲು ಹುಲಿಯಂತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಕಾಂಗ್ರೆಸ್‌ನಲ್ಲಿ ಇಲಿಯಂತಾಗಿದ್ದಾರೆ. ಅವರ ಪರಿಸ್ಥಿತಿ ಕಂಡರೆ ಅಯ್ಯೋ ಎನಿಸುತ್ತಿದೆ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಲೇವಡಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹಿಂದೆ ಎಲ್ಲ ಸಮುದಾಯಗಳ ಪರ ಕಾಳಜಿ, ಯಾವುದೇ ಜಾತಿ, ಧರ್ಮದ ಪರವಾಗಿ ನಿಲ್ಲದೇ ಸರ್ವ ಜನಾಂಗದ ಅಭಿವೃದ್ದಿಯ ವಿಚಾರವನ್ನು ಹೊಂದಿದವರು ಇಂದು ಒಂದು ಧರ್ಮದವರ ಪರ ನಿಂತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಬಗ್ಗೆ ನಮಗೆ ಗೌರವವಿದೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಾಯಕತ್ವವನ್ನು ನಾವು ಒಪ್ಪುವುದಿಲ್ಲ ಜಾರಕಿಹೊಳಿ ತಿಳಿಸಿದರು. ಈ ಕುರಿತು ಪಕ್ಷ ವರಿಷ್ಠರಿಗೂ ಸ್ಪಷ್ಟಪಡಿಸಲಾಗಿದ್ದು, ಜಯೇಂದ್ರ ಇರುವ ಕಡೆ ನಾವು ಹೋಗುವುದಿಲ್ಲ. ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆಯನ್ನು ಹೊಂದಿರುವುದಾಗಿ ತಿಳಿಸಿದರು.
ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ. ರಾಜ್ಯದಲ್ಲಿ ಪಕ್ಷವನ್ನು ಬಹುಮತದಿಂದ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು 130 ಕಡೆ ಗೆಲ್ಲಿಸುವ ನಿಟ್ಟಿನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸವನ್ನಿಟ್ಟುಕೊಂಡು ನಾನು, ಯತ್ನಾಳ, ಪ್ರತಾಪಸಿಂಹ್‌ ಸೇರಿದಂತೆ ಹಲವು ನಾಯಕರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇವೆ ಎಂದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.