ಟಿಕೆಟ್ ಆಕಾಂಕ್ಷಿ ಮುಸ್ಲಿಂ ಮುಖಂಡರ ಜತೆಗೆ ಮಾತನಾಡಿಯೇ ಶಿಗ್ಗಾವಿ ಅಭ್ಯರ್ಥಿ ಘೋಷಣೆ: ಪಾಟೀಲ

ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸೋಮವಾರದೊಳಗೆ ಹೆಸರನ್ನು ಅಂತಿಮಗೊಳಿಸುತ್ತೇವೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ…

ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸೋಮವಾರದೊಳಗೆ ಹೆಸರನ್ನು ಅಂತಿಮಗೊಳಿಸುತ್ತೇವೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್‌ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರ ಅಭಿಪ್ರಾಯ, ನಾಯಕರ ಶಿಫಾರಸು ಮತ್ತು ಶಾಸಕರ ಅಭಿಪ್ರಾಯ ಹೈಕಮಾಂಡ್‌ಗೆ ಕಳಿಸಲಾಗಿದೆ. ಕಾಂಗ್ರೆಸ್ ತನ್ನ ತತ್ವ ಸಿದ್ದಾಂತಗಳನ್ನು ಎಂದಿಗೂ ಬಿಡುವುದಿಲ್ಲ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾದ ಮುಸ್ಲಿಂ ಸಮುದಾಯದ ಖಾದ್ರಿ ಹಾಗೂ ಪಠಾಣ್ ಅವರಿಬ್ಬರನ್ನು ಕುಳಿಸಿ ಮಾತಾಡಿ ಅಭ್ಯರ್ಥಿಯನ್ನು ಘೋಷಿಸುತ್ತೇವೆ. ಶಿಗ್ಗಾವಿಯಲ್ಲಿ ಟಿಕೆಟ್ ಬದಲಾವಣೆ ಆಗುತ್ತದೆ ಎಂದು ಹೇಳಲಾಗುವುದಿಲ್ಲ. ಕಾಂಗ್ರೆಸ್‌ನಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಯುವುದಿಲ್ಲ. ರಾಜಕಾರಣದಲ್ಲಿ ಸಾಫ್ಟ್‌, ಹಾಡ್೯ ಎಂಬುದಿಲ್ಲ ಎಂದು ಹೇಳಿದರು.

ಕೇಂದ್ರದಿಂದ ಇ.ಡಿ. ದುರುಪಯೋಗ:

ಮುಡಾ ಪ್ರಕರಣದಲ್ಲಾದ ರಾಜಕಾರಣ ಬಗ್ಗೆ ಜನರು ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಚುನಾವಣೆ ಘೋಷಣೆಗೂ ಇ.ಡಿ ರೇಡ್‌ಗೂ ಏನು ಸಂಬಂಧ, ಚುನಾವಣೆ ಘೋಷಣೆ ಆಗುತ್ತಿದ್ದಂತೆ ಇ.ಡಿ ಕ್ರಿಯಾಶೀಲವಾಯ್ತಾ ಎಂದು ಪ್ರಶ್ನಿಸಿದ ಅವರು, ಮುಡಾ ಪ್ರಕರಣದಲ್ಲಿ ಯಾವುದಾದರೂ ಹಣಕಾಸು ಬದಲಾವಣೆ ಆಗಿದೆಯಾ, ಯಾರಾದ್ರು ಆಸ್ತಿ ತಗೊಂಡು ಓಡಿ ಹೋಗಿದ್ದಾರಾ, ರಾಜಕೀಯ ದುರುದ್ದೇಶ, ಕುತಂತ್ರ ಪ್ರಜಾಪ್ರಭುತ್ವಕ್ಕೆ ಸೂಕ್ತವಲ್ಲ. ಕೇಂದ್ರ ಸರ್ಕಾರ ಇಡಿಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.