ರಾಜ್ಯದಲ್ಲಿ ಎನ್‌ಕೌಂಟರ್ ಮಾಡುವ ಪರಿಸ್ಥಿತಿ ಬಂದಿಲ್ಲ. ಅಗತ್ಯ ಬಿದ್ದರೆ ಖಂಡಿತ ಎನ್‌ಕೌಂಟರ್ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಉದಯಗಿರಿ ಗಲಭೆ, ಕೊಪ್ಪಳದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಪರಿಷತ್‌ನಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಅಪರಾಧಗಳು ಕಡಿಮೆಯಾಗಿವೆ ಎಂದರು.
ಇದಕ್ಕೆ ವಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು, ಗೃಹ ಸಚಿವರ ಉತ್ತರ ತೃಪ್ತಿ ತಂದಿಲ್ಲ ಎಂದು ಸಭಾತ್ಯಾಗ ಮಾಡಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.