rain: ಇಂದು ಈ ಜಿಲ್ಲೆಗಳಲ್ಲಿ ಮಳೆ? ಇಲ್ಲಿದೆ ಹವಾಮಾನ ವರದಿ..

Vijayaprabha

rain: ಜುಲೈ ತಿಂಗಳಿನಲ್ಲಿ ರಾಜ್ಯಾದ್ಯಂತ ಅಬ್ಬರಿಸಿದ್ದ ಮಳೆರಾಯ ಇದೀಗ ದೂರಕ್ಕೆ ಸರಿದಿದ್ದಾನೆ. ಈ ಹಿನ್ನೆಲೆ ಇಂದು ಭಾನುವಾರ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಮೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಐಎಂಡಿ ವರದಿ ತಿಳಿಸಿದೆ.

rain

ಇದನ್ನು ಓದಿ: ಖಾತೆಗೆ 2000ರೂ, ಕೆಲವೆ ದಿನ ಬಾಕಿ; ಗೃಹಲಕ್ಷ್ಮೀ ಯೋಜನೆಗೆ ವಾಟ್ಸಾಪ್‌ನಲ್ಲಿ ಅರ್ಜಿ ಸಲ್ಲಿಸಿ!

ಇನ್ನು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ಚಾಮರಾಜ ನಗರ, ವಿಜಯನಗರದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ ಎಂಉ ತಿಳಿಸಿದೆ.

rain: ಸೋಮವಾರ ಹವಾಮಾನ ವರದಿ

ಸೋಮವಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಇದನ್ನು ಓದಿ: ಈ ಸೋಂಕಿನ ಬಳಿಕ ಹೃದಯಾಘಾತ ಹೆಚ್ಚಳ; ಇವೆ ಹೃದಯಾಘಾತದ ಸೂಚನೆಗಳು

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ ಇಲ್ಲಿ ಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version