ವೆಸ್ಟ್ ಇಂಡೀಸ್ ತಂಡವು ಇಂಟರ್‌ನ್ಯಾಷನಲ್ ಮಾಸ್ಟರ್ ಲೀಗ್ ಕ್ರಿಕೆಟ್ ಟೂರ್ನಿಯ ರೋಚಕ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಫೈನಲ್‌ಗೆ ಪ್ರವೇಶಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ವಿಂಡೀಸ್ ನಿಗದಿತ ಓವರ್‌ಗಳಲ್ಲಿ 5 ವಿಕೆಟ್‌ಗೆ 179ರನ್ ಗಳಿಸಿತ್ತು.
180 ರನ್‌ಗಳ ಗುರಿ ಬೆನ್ನತ್ತಿದ್ದ ಶ್ರೀಲಂಕಾ 9 ವಿಕೆಟ್ ಕಳೆದುಕೊಂಡು 173 ರನ್‌ಗಳಿಸಲಷ್ಟೇ ಶಕ್ತವಾಯಿತು.
ಈ ಮೂಲಕ ವಿಂಡೀಸ್ 6 ರನ್‌ಗಳಿಂದ ಗೆದ್ದು ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಫೈನಲ್‌ನಲ್ಲಿ ನಾಳೆ ಭಾರತವನ್ನು ಎದುರಿಸಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.