ಸರ್ಕಾರದಿಂದ ಎಲ್‌ಪಿಜಿ 200 ರೂ ಸಬ್ಸಿಡಿ ಘೋಷಣೆ; ಏನಿದು ಉಜ್ವಲ ಯೋಜನೆ, ಉಚಿತ ಸಂಪರ್ಕ ಪಡೆಯುವುದು ಹೇಗೆ?

Vijayaprabha

ನವದೆಹಲಿ : ಕೇಂದ್ರದ ಮಹತ್ವದ ಯೋಜನೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ((PMUY) ಪ್ರತಿ ಅಡುಗೆ ಅನಿಲ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡಲಾಗುತ್ತಿದ್ದು, ಈ ಅನುದಾನವನ್ನ ಇನ್ನೊಂದು ವರ್ಷಕ್ಕೆ ವಿಸ್ತರಿಸಲಾಗಿದೆ.

ಇದನ್ನು ಓದಿ: ಉಚಿತ LPG ಸಂಪರ್ಕ ಪಡೆಯುವುದು ಹೇಗೆ? ಅನಿಲ ಭಾಗ್ಯ ಯೋಜನೆಯ ಪ್ರಾಮುಖ್ಯತೆ ಮತ್ತು ಮಾನದಂಡಗಳೇನು?

ಹೌದು, ಕೇಂದ್ರ ಸಚಿವ ಸಂಪುಟ ಸಭೆದಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಈ ಮಾಹಿತಿ ನೀಡಿದ್ದು, ‘ಉಜ್ವಲ ಯೋಜನೆಯಡಿ ಪ್ರತಿ ಅಡುಗೆ ಅನಿಲ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡಲಾಗುತ್ತಿದೆ. ಈ ಅನುದಾನವನ್ನ ಇನ್ನೊಂದು ವರ್ಷಕ್ಕೆ ವಿಸ್ತರಿಸಲಾಗಿದ್ದು, ಇದರಿಂದ 9.6 ಕೋಟಿ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಇದನ್ನು ಓದಿ: ಈ ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಏನಿದು ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಉಚಿತ LPG ಸಂಪರ್ಕ ಪಡೆಯುವುದು ಹೇಗೆ?

ಕೇಂದ್ರ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಬಿ.ಪಿ.ಎಲ್ ಕುಟುಂಬಗಳಿಗೆ ಉಚಿತವಾಗಿ ಎಲ್.ಪಿ.ಜಿ ಸಂಪರ್ಕವನ್ನು ನೀಡುವ ಗುರಿಯೊಂದಿಗೆ ಆರಂಭಿಸಿರುವ ಯೋಜನೆಯೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ((PMUY).

ಪ್ರಸ್ತುತ ಯೋಜನೆಯಡಿ ಠೇವಣಿ ರಹಿತ ಎಲ್‌ಪಿಜಿ ಸಂಪರ್ಕದ ಹೊರತಾಗಿ 800 ರೂಕ್ಕಿಂತ ಹೆಚ್ಚು ಮೌಲ್ಯದ ಉಚಿತ ರೀಫಿಲ್ ಮತ್ತು ಫಲಾನುಭವಿಗಳಿಗೆ ಉಚಿತ ಸ್ಟೌವ್ ಒದಗಿಸಲಾಗುವುದು.

ಇದನ್ನು ಓದಿ: ಪಾನ್- ಆಧಾರ್ ಲಿಂಕ್ ಮಾಡಿದ್ದೀರಾ? ಇಲ್ಲವಾ? ಗುರುತು ಇಲ್ಲದಿದ್ದರೂ ಪರವಾಗಿಲ್ಲ, ಸಿಂಪಲ್‌ಗಾ ಹೀಗೆ ಚೆಕ್ ಮಾಡಿ ಲಿಂಕ್ ಮಾಡಿಕೊಳ್ಳಿ!

ಉಜ್ವಲ ಯೋಜನೆಗೆ ಅರ್ಹತೆ ಏನು?

ಅರ್ಜಿದಾರರು ಮಹಿಳೆಯೇ ಆಗಿರಬೇಕಿದ್ದು, ಮಹಿಳೆಯ ವಯಸ್ಸು 18ಕ್ಕಿಂತ ಹೆಚ್ಚಿರಬೇಕು

ಅರ್ಜಿದಾರರು ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದವರಾಗಿರಬೇಕಾಗಿದ್ದು, ಬಿಪಿಎಲ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಹೊಂದಿರಬೇಕು

ಇನ್ನು, ಅರ್ಜಿದಾರರ ಕುಟುಂಬದ ಯಾವೊಬ್ಬ ಸದಸ್ಯರ ಹೆಸರಿನಲ್ಲಿಯೂ ಎಲ್‌ಪಿಜಿ ಕನೆಕ್ಷನ್ ಇರಬಾರದು

ಇದನ್ನು ಓದಿ: ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿ

ಅಗತ್ಯ ದಾಖಲೆಗಳು

ಪಿಎಂಯುವೈ (PMUY) ಉಜ್ವಲ ಯೋಜನೆಯ ಸೌಲಭ್ಯ ಪಡೆಯಲು ಆಧಾರ್‌ ಕಾರ್ಡ್‌, ಪಡಿತರ ಚೀಟಿ, ವಿಳಾಸದ ಪುರಾವೆ ಹಾಗೂ ಬ್ಯಾಂಕ್‌ ಪಾಸ್‌ಪುಸ್ತಕದ ಪ್ರತಿಯನ್ನು ಸಲ್ಲಿಸಬೇಕು. ವಲಸಿಗರು ಉಜ್ವಲ ಯೋಜನೆಯ ಲಾಭ ಪಡೆಯಲು ಪಡಿತರ ಚೀಟಿ, ವಿಳಾಸ ಪುರಾವೆ ಸಲ್ಲಿಸುವ ಅಗತ್ಯವಿಲ್ಲ. ಕುಟುಂಬ ಮತ್ತು ವಿಳಾಸದ ಪುರಾವೆಯನ್ನು ಇವರು ಸ್ವಯಂ ಘೋಷಣೆ ಮಾಡಿಕೊಳ್ಳಬಹುದು.

ಇದನ್ನು ಓದಿ: ಮೋದಿ ಸರ್ಕಾರದ ಭರ್ಜರಿ ಗಿಫ್ಟ್‌; ನೌಕರರ ತುಟ್ಟಿ ಭತ್ಯೆ ಹೆಚ್ಚಳ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ?

ಅರ್ಜಿ ಸಲ್ಲಿಸುವುದು ಹೇಗೆ?

ಇನ್ನು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಎಲ್‌ಪಿಜಿ ವಿತರಣಾ ಏಜೆನ್ಸಿಯಲ್ಲಿ ಅರ್ಜಿ ಭರ್ತಿ ಮಾಡಿ ಆಫ್‌ಲೈನ್ ಮೋಡ್ ಮೂಲಕ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸುವುವ ಅರ್ಜಿದಾರರು ಇಲಾಖೆಯ ಅಧಿಕೃತ ವೆಬ್‌ಸೈಟ್ pmujjwalayojana.com ಗೆ ಹೋಗಿ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಈ ಫಾರ್ಮ್ ಅನ್ನು ಹತ್ತಿರದ ಎಲ್‌ಪಿಜಿ ಕೇಂದ್ರದಲ್ಲಿ ಸಲ್ಲಿಸಬೇಕು.

ಇದನ್ನು ಓದಿ: ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿ, ಒಕ್ಕಲಿಗ, ಲಿಂಗಾಯತರಿಗೆ ಹಂಚಿಕೆ; ಯಾರಿಗೆ ಎಷ್ಟು ಮೀಸಲಾತಿ, ಇಲ್ಲಿದೆ ಸಂಪೂರ್ಣ ಮಾಹಿತಿ

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version