ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ‘ವಿಕ್ರಾಂತ್ ರೋಣ’ ಸಿನಿಮಾ ಈಗಾಗಲೇ ಬಾಕ್ಸ್ ಆಫಿಸ್ನಲ್ಲಿ ₹150 ಕೋಟಿ ಕಲೆಕ್ಷನ್ ಮಾಡಿದ್ದು, ಈಗ ಈ ಚಿತ್ರ ₹200 ಕೋಟಿ ಕ್ಲಬ್ ಸೇರಲು ದಾಪುಗಾಲು ಇಡುತ್ತಿದೆ.
ಹೌದು, ಇದೀಗ ವಿಕ್ರಾಂತ್ ರೋಣ’ ಸಿನಿಮಾ ಜಗತ್ತಿನ ಮೂಲೆ ಮೂಲೆಯಲ್ಲೂ ಸದ್ದು ಮಾಡುತ್ತಿದ್ದು, ಈಗಾಗಲೇ ಹಾಲಿವುಡ್ ಅಂಗಳಕ್ಕೆ ಎಂಟ್ರಿಯಾದ ಮೊಟ್ಟಮೊದಲ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಯನ್ನ ಈ ಸಿನಿಮಾ ಪಡೆದಿದ್ದು, ಕೋಟಿ ಕೋಟಿ ಭಾರತೀಯರು ಮತ್ತು ಜಗತ್ತಿನಾದ್ಯಂತ ಇರುವ ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಸಿನಿಮಾ ನೋಡಿ ಕಣ್ತುಂಬಿಕೊಂಡಿದ್ದಾರೆ.
ಇನ್ನು, ‘ವಿಕ್ರಾಂತ್ ರೋಣ’ ಸಿನಿಮಾವನ್ನು ಅನೂಪ್ ಬಂಡಾರಿ ನಿರ್ದೇಶನ ಮಾಡಿದ್ದೂ, ಗ್ಲಾಮರ್ ತಾರೆ ಜಾಕ್ವೆಲಿನ್ ಫರ್ನಾಂಡಿಸ್, ನಿರೂಪ್ ಬಂಡಾರಿ, ನೀತಾ ಅಶೋಕ್, ರವಿಶಂಕರ ಗೌಡ, ಮಧುಸೂದನ್ ರಾವ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.